ಶನಿವಾರ, ಮೇ 15, 2021
24 °C

ಡಿಕೆಶಿಗೆ ಸಿಕ್ಕಿದ್ದು ಮಂಡಕ್ಕಿ ಮೂಟೆ: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಸ್ಕಿಯಲ್ಲಿ ಹಿಡಿದ ಎರಡು ಮೂಟೆಗಳಲ್ಲಿ ಸಿಕ್ಕಿದ್ದು ಮಂಡಕ್ಕಿಯೇ ಹೊರತು ಹಣವಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಈ ಕುರಿತು ವಿಡಿಯೊ ಒಂದನ್ನು ಬಿಡುಗಡೆ ಮಾಡಿರುವ ಅವರು, ಬಿಜೆಪಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಸುಳ್ಳು ಪ್ರಚಾರ ನಡೆಸಿರುವ ಶಿವಕುಮಾರ್‌ ಅವರು ಯಡಿಯೂರಪ್ಪ ಮತ್ತು ನಳಿನ್ ಕುಮಾರ್‌ ಕಟೀಲ್‌ ಅವರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿಯವರು ಎರಡು ಚೀಲಗಳಲ್ಲಿ ಹಣ ಇಟ್ಟಿದ್ದರು ಎನ್ನಲಾದ ನಿಗದಿತ ಸ್ಥಳಕ್ಕೆ ಪೊಲೀಸರು ತೆರಳಿ ಆ ಚೀಲಗಳನ್ನು ಪರಿಶೀಲಿಸಿದಾಗ ಅದರಲ್ಲಿ ಮಂಡಕ್ಕಿ ಮಾತ್ರ ಇತ್ತು. ಒಂದು ಪೈಸೆಯೂ ಸಿಕ್ಕಿಲ್ಲ ಎಂದು ರವಿಕುಮಾರ್‌ ಸ್ಪಷ್ಟಪಡಿಸಿದರು.

ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು