ಗುರುವಾರ , ಅಕ್ಟೋಬರ್ 29, 2020
28 °C
ಮೊಹಮ್ಮದ್ ನಲಪಾಡ್‌‌ ನೇತೃತ್ವದಲ್ಲಿ ಸಿದ್ದರಾಮಯ್ಯ ಭೇಟಿ

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಅವಿರೋಧ ಆಯ್ಕೆಗೆ ನಲಪಾಡ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ವರ್ಷ ರಾಜ್ಯ ಯುವ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಆಗ್ರಹಿಸಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ನೇತೃತ್ವದ ತಂಡ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಶುಕ್ರವಾರ ಅವರನ್ನು ಭೇಟಿ ಮಾಡಿದ ನಲಪಾಡ್‌ ನೇತೃತ್ವದ ತಂಡ, ‘ಕೊರೊನಾ ಸೋಂಕು ಹರಡು
ತ್ತಿರುವ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ಸದಸ್ಯತ್ವ ನೋಂದಣಿ ಕಷ್ಟವಾಗುತ್ತದೆ. ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕೂ ಸಾಕಷ್ಟು ತಯಾರಿ ಅಗತ್ಯ. ಈ ಎಲ್ಲವನ್ನೂ ಪರಿಗಣಿಸಿ ಈ ಬಾರಿ ಚುನಾವಣೆ ಕೈಬಿಡಬೇಕು. ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಆಗ್ರಹಿಸಿತು.

ಚುನಾವಣಾ ಪ್ರಕ್ರಿಯೆಯ ಕುರಿತೂ ಈ ತಂಡ ಸಿದ್ದರಾಮಯ್ಯ ಅವರಲ್ಲಿ ದೂರು ಸಲ್ಲಿಸಿದೆ. ಇತರ ರಾಜ್ಯಗಳಲ್ಲಿ 1985ರ ನಂತರ ಜನಿಸಿದವರಿಗಷ್ಟೇ ಯುವ ಕಾಂಗ್ರೆಸ್‌ ಸದಸ್ಯತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ರಾಜ್ಯದಲ್ಲಿ ನಾಲ್ಕು ತಿಂಗಳ ರಿಯಾಯ್ತಿ ನೀಡಲಾಗಿದೆ. ಕೆಲವರಿಗೆ ಅನುಕೂಲ ಮಾಡಿಕೊಡುವ ಉದ್ದೇಶ
ದಿಂದ ಈ ರೀತಿ ಮಾಡಲಾಗಿದೆ ಎಂದು ಈ ತಂಡ ದೂರಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು