ಶನಿವಾರ, ಜನವರಿ 29, 2022
17 °C

ಕಾಂಗ್ರೆಸ್‌ಗೆ ಬರಲು ನಳಿನ್‌ಕುಮಾರ್ ಕಟೀಲ್‌ಗೆ ಯು.ಟಿ. ಖಾದರ್ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ನಳಿನ್‌ಕುಮಾರ್ ಕಟೀಲ್ ವಿದ್ಯಾರ್ಥಿ ಜೀವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಈಗ ಮರಳಿ ಪಕ್ಷಕ್ಕೆ ಬರುವುದಾದರೆ ಸ್ವಾಗತ ಕೋರುತ್ತೇನೆ’ ಎಂದು ಶಾಸಕ ಯು. ಟಿ. ಖಾದರ್ ಹೇಳಿದರು.

‘ಯು.ಟಿ. ಖಾದರ್ ಮತ್ತು ರಮಾನಾಥ್ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಮುಖಂಡರನ್ನು ಬಿಜೆಪಿಗೆ ಕರೆ ತನ್ನಿ’ ಎಂಬ ನಳಿನ್‌ಕುಮಾರ್ ಕಟೀಲ್ ಹೇಳಿಕೆ ತಿರುಗೇಟು ನೀಡಿದ ಅವರು, ‘ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯವರು, ಹಾಗಾಗಿ ಒಳ್ಳೆಯವರನ್ನು ಪಕ್ಷಕ್ಕೆ ಸೇರಿಸಲು ನಳಿನ್‌ಕುಮಾರ್ ಕಟೀಲ್ ಹೇಳಿರಬಹುದು’ ಎಂದರು.

‘ನಳಿನ್‌ಕುಮಾರ್ ವಿದ್ಯಾರ್ಥಿ ಜೀವನದಲ್ಲಿದ್ದಾಗ, ಆಗ ಎನ್‌ಎಸ್‌ಯುಐನಲ್ಲಿದ್ದ ಕಾಂಗ್ರೆಸ್‌ನ ವಿನಯ್ ಕುಮಾರ್ ಸೊರಕೆ ಪರ ದುಡಿದಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ನಳಿನ್ ಕೆಲಸ ಮಾಡುತ್ತಿದ್ದರು. ನಳಿನ್‌ಗೆ ಈಗ ಹಿಂದಿನ ಕೆಲಸ ನೆನಪಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಬದ್ಧತೆ ಹಾಗೂ ಶಕ್ತಿ ನಳಿನ್‌ಗೆ ಗೊತ್ತಿದೆ. ಹಾಗಾಗಿ ನಳಿನ್‌ಕುಮಾರ್ ಮತ್ತೆ ಪಕ್ಷಕ್ಕೆ ಬರುವುದಾದರೆ ಸ್ವಾಗತ ಕೋರುತ್ತೇನೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು