ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಶಾಶ್ವತ ನಿದ್ದೆಗೆ ಜಾರಲಿದೆ: ನಳಿನ್‌ ಕುಮಾರ್‌ ಕಟೀಲ್‌

Last Updated 19 ಫೆಬ್ರುವರಿ 2022, 14:41 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಶಾಸಕರು ಅಹೋರಾತ್ರಿ ನಿದ್ರಾ ಧರಣಿ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುತ್ತಿದ್ದರೆ, ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಬಳಿಕ ರಾಜ್ಯದಲ್ಲೂ ಕಾಂಗ್ರೆಸ್‌ ಪಕ್ಷ ಶಾಶ್ವತ ನಿದ್ದೆಗೆ ಜಾರಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಶನಿವಾರ ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ಜವಾಬ್ದಾರಿಯುತ ರಾಜಕೀಯ ಪಕ್ಷ ಯಾವ ವಿಷಯಕ್ಕೆ ಹೋರಾಟ ನಡೆಸುತ್ತದೆ ಎಂಬುದನ್ನು ರಾಜ್ಯದ ಜನರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನರಿಗೆ ಏನು ಅನುಕೂಲ ಆಗುತ್ತದೆ ಎಂಬ ಪ್ರಶ್ನೆಗೆ ಕಾಂಗ್ರೆಸ್‌ ನಾಯಕರಲ್ಲಿ ಉತ್ತರವಿಲ್ಲ. ಬೌದ್ಧಿಕವಾಗಿ ಕಾಂಗ್ರೆಸ್‌ ದಿವಾಳಿ ಆಗಿರುವುದಕ್ಕೆ ಈ ಧರಣಿ ಸಾಕ್ಷಿ’ ಎಂದಿದ್ದಾರೆ.

‘ಕಾಂಗ್ರೆಸ್‌ ಶಾಸಕರು ಸದನದಲ್ಲಿ ಮಲಗುವುದಕ್ಕೆ ಮಾತ್ರ ಲಾಯಕ್ಕು ಎಂಬುದು ಜನರಿಗೆ ಅರ್ಥವಾಗಿದೆ. ಇವರನ್ನು ಆರಿಸಿ ಕಳುಹಿಸಿದ ಮತದಾರರು ಭ್ರಮನಿರಸನಗೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷವು ಸದನದಲ್ಲಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಜನರಿಗೆ ಅನ್ಯಾಯ ಮಾಡಿದೆ. ಬಿಜೆಪಿ ಸರ್ಕಾರದ ಯಶಸ್ಸನ್ನು ಕಂಡು ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು, ಪಲಾಯನವಾದ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT