ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಲೂಟಿ ಅಂಗಡಿ ಬಂದ್ ಆಗಲಿದೆ: ನಳಿನ್‌ ಕುಮಾರ್ ಕಟೀಲ್

Last Updated 20 ನವೆಂಬರ್ 2021, 16:31 IST
ಅಕ್ಷರ ಗಾತ್ರ

ಕಲಬುರಗಿ: ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತದಾರರು ಸೋಲಿಸಿ ಬೆಂಗಳೂರಿನಲ್ಲೇ ಉಳಿಯುವಂತೆ ಮಾಡಿದಿರಿ. ಈಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ 24 ಸ್ಥಾನಗಳನ್ನು ನೀಡುವ ಮೂಲಕ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಅವರನ್ನೂ ಊರು ಬಿಡುವಂತೆ ಮಾಡಿದ್ದೀರಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ವಿಧಾನಪರಿಷತ್ ಚುನಾವಣೆ ಪ್ರಯುಕ್ತ ನಗರದಲ್ಲಿ ಶನಿವಾರ ಆಯೋಜಿಸಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಳೆದ 50 ವರ್ಷಗಳಲ್ಲಿ ಖರ್ಗೆ ಗ್ಯಾಂಗ್‌ನವರ ಅಂಗಡಿ ಲೂಟಿಯಲ್ಲಿ ತೊಡಗಿತ್ತು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ ಅವರನ್ನು ಗೆಲ್ಲಿಸುವ ಮೂಲಕ ಖರ್ಗೆ ಲೂಟಿ ಗ್ಯಾಂಗ್‌ನ ಅಂಗಡಿ ಸಂಪೂರ್ಣ ಬಂದ್ ಆಗುವ ಸಮಯ ಸನ್ನಿಹಿತವಾಗಿದೆ’ ಎಂದು ಹೇಳಿದರು.

‘ಆರಗ ಜ್ಞಾನೇಂದ್ರ ಅವರು ಗೃಹಸಚಿವರಾದ ಬಳಿಕ ರಾಜ್ಯದಾದ್ಯಂತ ತಿರುಗಿ ಕೆಲಸ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದಾಗಿಯೇ ಬೀದಿಗಳಲ್ಲಿ ಹಿಂದುಗಳ ಹೆಣ ಬೀಳುವುದು ನಿಂತಿದೆ. ಗೋಹತ್ಯೆ ನಿಂತಿದೆ. ಹೀಗಾಗಿ ಕಾಂಗ್ರೆಸ್‌ನವರಿಗೆ ಮಾತನಾಡಲು ಯಾವ ವಿಷಯವೂ ಇಲ್ಲದ್ದರಿಂದ ಹುಚ್ಚರಂತೆ ಏನೇನೋ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT