ಶುಕ್ರವಾರ, ಅಕ್ಟೋಬರ್ 2, 2020
21 °C

ಕೋವಿಡ್–19: ನಳಿನ್ ಕುಮಾರ್ ಕಟೀಲ್ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಕೋವಿಡ್ ನಿಂದ  ಗುಣಮುಖರಾಗಿದ್ದು, ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡುದ್ದೇನೆ ಎಂದಿದ್ದಾರೆ.

ನಳಿನ್‌‌ ಕುಮಾರ್‌ ಕಟೀಲ್‌ ಅವರಿಗೆ ಆಗಸ್ಟ್‌ 30ರಂದು ಕೋವಿಡ್ ದೃಢಪಟ್ಟಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು