ಶನಿವಾರ, ಏಪ್ರಿಲ್ 1, 2023
32 °C

ದೇವೇಗೌಡರ ಪಾದದ ದೂಳಿಗೂ ಕಟೀಲ್‌ ಸಮನಲ್ಲ: ಎಚ್.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ದೇವೇಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ದೇವೇಗೌಡರ ಪಾದದ ದೂಳಿಗೂ ಕಟೀಲ್‌ ಸಮನಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು. 

ಇಲ್ಲಿ ನಡೆದ ಪಂಚರತ್ನ ರಥಯಾತ್ರೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ, ನೈತಿಕತೆ ಇಲ್ಲ, ದೇವೇಗೌಡರ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಕೇಳಿ ತಿಳಿದುಕೊಳ್ಳಿ’ ಎಂದರು.

ಕ್ಷಮೆಗೆ ಆಗ್ರಹ: ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸಿ.ಎಂ.‌ಇಬ್ರಾಹಿಂ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಕಪ್ಪುಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು