ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 80ಕ್ಕೂ ಹೆಚ್ಚು ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರ ಗೆಲುವು: ಕಟೀಲ್

Last Updated 23 ನವೆಂಬರ್ 2020, 13:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಶೇ 80ಕ್ಕೂ ಹೆಚ್ಚು ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಭಾರತೀಯ ಜನತಾ ಪಕ್ಷದ ವತಿಯಿಂದ ಗ್ರಾಮ ಸ್ವರಾಜ್ ಸಮಾವೇಶಗಳನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ಇದರ ಪೂರ್ವ ತಯಾರಿಗೆ ಸಂಬಂಧಿಸಿ ನಗರದಲ್ಲಿ ಸೋಮವಾರ ನಡೆದ ಪಕ್ಷದ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಜಾತಿಯವರಿಗೆ ಸ್ಪರ್ಧಿಸಲು ಪಕ್ಷ ಆದ್ಯತೆ ಕೊಡಲಿದೆ. ಪಂಚಾಯಿತಿ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ನಳಿನ್ ಕುಮಾರ್ ಕಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಹಾಗೂ ಕಂದಾಯ ಸಚಿವ ಆರ್.ಅಶೋಕ ಅವರ ನೇತೃತ್ವದಲ್ಲಿ ಈ ತಂಡಗಳು ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಚಾಯತ್‌ಗಳಿಗೆ ಗರಿಷ್ಠ ಅನುದಾನ ನೀಡಿದ್ದಾರೆ. ಇದು ಪಕ್ಷದ ಅಭೂತಪೂರ್ವ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಭಿಪ್ರಾಯಪಟ್ಟರು.

ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಉಪ ಮುಖ್ಯಮಂತ್ರಿಗಳಾದ ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ, ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT