ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್‌ನಿಂದ ಸಿಬಿಐ ಬಳಕೆ ಸಾಬೀತಾಗಿದೆ'

Last Updated 5 ಅಕ್ಟೋಬರ್ 2020, 11:05 IST
ಅಕ್ಷರ ಗಾತ್ರ

ಬೆಂಗಳೂರು: ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐ ಅನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಇ.ಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ? ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ! ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT