ಶನಿವಾರ, ಜುಲೈ 2, 2022
22 °C

ಕಾಂಗ್ರೆಸ್‌ನಿಂದ ಎಷ್ಟು ಮಂದಿ ಬರ್ತಾರೆ ಕಾದು ನೋಡಿ: ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಬಿಟ್ಟು ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ. ಎಷ್ಟು ಜನ ಬರುತ್ತಾರೆ ಎನ್ನುವುದನ್ನು ಕಾದು ನೋಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.

‘ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿ ಇರಲಿಲ್ಲ’ ಎಂಬ ಶಿವಕುಮಾರ್‌ ಹೇಳಿಕೆಗೆ ಮೇಲಿನಂತೆ ಇಲ್ಲಿ ಗುರುವಾರ ಪ್ರತಿಕ್ರಿಯಿಸಿದರು.

ಪಠ್ಯಕ್ರಮ ಪರಿಷ್ಕರಣೆ ವಿರೋಧಿಸಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಮುಖಂಡರು ಎಚ್ಚರಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಆ ಪಕ್ಷದವರು ಇನ್ನೊಂದು ವರ್ಷ ಹೋರಾಟದ ಮಾರ್ಗದಲ್ಲೇ ಇರುವುದು ಒಳ್ಳೆಯದು. ಪರಿಷ್ಕರಣೆಯಾಗಿ, ಪಠ್ಯದಲ್ಲಿ ಸರಿಯಾದ ವಿಚಾರಗಳು ಬಂದಾಗ ಚರ್ಚೆಗಳು ಸಹಜ’ ಎಂದು ಸಮರ್ಥಿಸಿಕೊಂಡರು.

ರಮೇಶ ಹಾಜರು: ವಾಯವ್ಯ ಪದವೀಧರರು ಮತ್ತು ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಕಟೀಲ್‌ ಅಧ್ಯಕ್ಷತೆಯಲ್ಲಿ ಕರೆದಿದ್ದ ಮುಖಂಡರ ಸಭೆಯಲ್ಲಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಭಾಗವಹಿಸಿದ್ದರು. ಆದರೆ, ನಂತರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಈ ಹಿಂದೆ ಆಯೋಜನೆಯಾಗಿದ್ದ ಹಲವು ಸಭೆಗಳಿಂದ ಅವರು ದೂರ ಉಳಿದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು