ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್–ಟಿಪ್ಪು ಸಿದ್ಧಾಂತದ ನಡುವೆ ಚುನಾವಣೆ –ಕಟೀಲ್

Last Updated 7 ಫೆಬ್ರುವರಿ 2023, 21:27 IST
ಅಕ್ಷರ ಗಾತ್ರ

ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದರು.

ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.

‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.

‘ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್ ಪಕ್ಷವೇ ಉಗ್ರ ಸಂಘಟನೆ’

ಕಾರವಾರ: ಕಾಂಗ್ರೆಸ್ ಪಕ್ಷವೇ ಭಯೋತ್ಪಾದಕ ಸಂಘಟನೆ‌. ಅವರ ತುಷ್ಟೀಕರಣ ನೀತಿಯಿಂದಲೇ ಮತೀಯ ಗಲಭೆಗಳು ನಡೆದಿವೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಇಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಬಿಜೆಪಿ ಅವಧಿಯಲ್ಲಿ ಹಿಂದೂಗಳ ಅತಿ ಹೆಚ್ಚು ಹತ್ಯೆ ಆಗಿದೆ’ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್ ಆಡಳಿತ ಮತೀಯ ಗಲಭೆಗೆ ಪ್ರೇರಣೆ ನೀಡಿತ್ತು. ಪಿಎಫ್ಐ ಕಾರ್ಯಕರ್ತರನ್ನು ಜೈಲಿನಿಂದ ಸಿದ್ದರಾಮಯ್ಯ ಬಿಡುಗಡೆ ಮಾಡಿಸಿದ್ದರು‌. ಅವರ ಆಡಳಿತದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT