ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿಬೆಟ್ಟಕ್ಕೆ ರೋಪ್‌ವೇ ಟೆಂಡರ್‌ಗೆ ಒಪ್ಪಿಗೆ

Last Updated 18 ಫೆಬ್ರುವರಿ 2022, 18:43 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ರೋಪ್‌ವೇ ಅಳವಡಿಸುವ ₹93.40 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಟೆಂಡರ್‌ ಕರೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನಂದಿ ಬೆಟ್ಟದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಆಧಾರದ ಮೇಲೆ ರೋಪ್‌ ವೇ ಅಭಿವೃದ್ಧಿ ಮತ್ತು ಕಾರ್ಯಾಚರಣೆಗಾಗಿ ಖಾಸಗಿ ಪಾಲುದಾರರ ಆಯ್ಕೆಗೆ ಟೆಂಡರ್‌ ಅನ್ನು ಆಹ್ವಾನಿಸಲಾಗುವುದು.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಡಾ.ಕೆ.ಸುಧಾಕರ್‌, ನಂದಿ ಬೆಟ್ಟದ ತಪ್ಪಲಿನಿಂದ ಸುಮಾರು 2.93 ಕಿ.ಮೀ. ಎತ್ತರದ ಬೆಟ್ಟ ಪ್ರದೇಶಕ್ಕೆ ರೋಪ್-ವೇ ನಿರ್ಮಿಸಿ ಪ್ರವಾಸಿಗರನ್ನು ಕರೆದೊಯ್ಯಲು ಉದ್ದೇಶಿಸಿದ್ದು, ಲ್ಯಾಂಡಿಂಗ್ ಸ್ಟೇಷನ್ (ಇಳಿಯುವ ಸ್ಥಳ) ಬೆಟ್ಟದ ತಳಭಾಗ ಹಾಗೂ ಮೇಲ್ಭಾಗದ ಎರಡೂ ಕಡೆ ಇರುವಂತೆ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಒಟ್ಟು 18 ಟವರ್ ಗಳನ್ನು ನಿರ್ಮಿಸಲಾಗುತ್ತದೆ. ಇದರ ಜೊತೆಗೆ ರೆಸ್ಟೋರೆಂಟ್, ಕೆಫೆ, ಆಹಾರ ಮಳಿಗೆ, ಇತರೆ ಮಳಿಗೆಗಳನ್ನು ನಿರ್ಮಿಸಲು ಅವಕಾಶವಿರುತ್ತದೆ. ರೋಪ್-ವೇ ನಲ್ಲಿ 50 ಕ್ಯಾಬಿನ್‌ಗಳಿರಲಿದ್ದು, ಪ್ರತಿಯೊಂದರಲ್ಲೂ 10 ಮಂದಿ ಪ್ರಯಾಣಿಸಬಹುದು. ಒಟ್ಟು 28 ನಿಮಿಷಗಳಲ್ಲಿ ಕ್ರಮಿಸಬಹುದು ಎಂದು ಅವರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT