ಬುಧವಾರ, ಮೇ 25, 2022
26 °C

62ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಸಿ.ಎಂ ಬೊಮ್ಮಾಯಿ: ಶುಭ ಕೋರಿದ ಮೋದಿ, ಅಮಿತ್ ಶಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶುಕ್ರವಾರ) 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

‘ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭಾಶಯಗಳು. ರಾಜ್ಯದ ಅಭಿವೃದ್ಧಿ, ಬಡವರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ದೀರ್ಘ ಆಯಸ್ಸು ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರಿಗೆ ಜನರ ಸೇವೆ ಮಾಡಲು ದೀರ್ಘಾಯಸ್ಸು ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

‘ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು,  ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸರ್ವತೋಮುಖ ಬೆಳವಣಿಗೆಗಾಗಿ ಸಮರ್ಥ  ಆಡಳಿತವನ್ನು ನೀಡುತ್ತಿರುವ ಅವರಿಗೆ ಭಗವಂತನು ಜನರ ಸೇವೆಯನ್ನು ಮಾಡಲು ಹೆಚ್ಚಿನ  ಆರೋಗ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶುಭ ಕೋರಿದ್ದಾರೆ.

‘ನಾಡಿನ ಜನಪ್ರಿಯ ನಾಯಕರು, ತಮ್ಮ ಸರಳತೆ, ಸಜ್ಜನಿಕೆ, ಸೌಜನ್ಯದಿಂದ ಕಾಮನ್ ಮ್ಯಾನ್ ಸಿ.ಎಂ ಎಂದೇ ಹೆಸರುವಾಸಿಯಾಗಿರುವ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಕಾಮನೆಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಲಿ, ತಮ್ಮ ನೇತೃತ್ವದಲ್ಲಿ ಕರ್ನಾಟಕ ಎಲ್ಲ ರಂಗಗಳಲ್ಲೂ ಮುನ್ನಡೆಯಲಿ ಎಂದು ಹಾರೈಸುವೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಸೇವೆ ಮಾಡಲು ಅವರಿಗೆ ಆ ಭಗವಂತ ಇನ್ನೂ ಹೆಚ್ಚಿನ ಚೈತನ್ಯ, ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಚ್‌.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು