ಸೋಮವಾರ, ಸೆಪ್ಟೆಂಬರ್ 20, 2021
22 °C

ಮೋದಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿ: ಕಾಂಗ್ರೆಸ್‌ ಸವಾಲು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನಿ ಮೋದಿಯವರಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿ ಎಂದು ಕಾಂಗ್ರೆಸ್‌ ಸವಾಲು ಹಾಕಿದೆ.

'ಗಾಂಧಿ ಕುಟುಂಬಕ್ಕಾಗಿ ಚಪ್ಪಲಿ ಸವೆಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ಲಭಿಸಿದೆ. ರಾಹುಲ್‌ ಗಾಂಧಿಯವರಿಗೆ ಪಾಠ ಹೇಳಿಕೊಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಗಾಂಧಿ ಕುಟುಂಬದ ಸೇವೆಯೇ ದೇಶ ಸೇವೆ' ಎಂದು ಬಿಜೆಪಿ ಟ್ವೀಟ್‌ ಮಾಡುವ ಮೂಲಕ ವಿಡಿಯೊವೊಂದನ್ನು ಹಂಚಿಕೊಂಡಿತ್ತು.

ಇದನ್ನೂ ಓದಿ- ರಾಹುಲ್‌ಗೆ ಪಾಠ ಹೇಳಿಕೊಡುತ್ತಿದ್ದಾರೆ ಖರ್ಗೆ: ಬಿಜೆಪಿ ವ್ಯಂಗ್ಯ 

ಇದಕ್ಕೆ ಟ್ವೀಟ್‌ ಮೂಲಕವೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, 'ಪಕ್ಷಕ್ಕಾಗಿ, ದೇಶಕ್ಕಾಗಿ ಬದುಕು ಸವೆಸಿದ ಖರ್ಗೆ ಅವರಂತಹ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಪಕ್ಷ ಸಂಘಟಿಸುವ ಸಂಸ್ಕೃತಿ ನಮ್ಮಲ್ಲಿದೆ. ನೀವು(ಬಿಜೆಪಿ) ಅಡ್ವಾಣಿ, ಮುರಳಿ ಮನೋಹರ ಜೋಶಿಯವರನ್ನು ಮೂಲೆಗೆ ಕೂರಿಸಿದಂತೆ ನಮ್ಮಲ್ಲಿಲ್ಲ. ಮೋದಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ಹಾಗೂ ಟೆಲಿಪ್ರಾಂಪ್ಟರ್ ಇಲ್ಲದೆ ಭಾಷಣ ಮಾಡಲು ಹೇಳಿ' ಎಂದು ತಿರುಗೇಟು ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು