ಭಾನುವಾರ, ಸೆಪ್ಟೆಂಬರ್ 19, 2021
24 °C

ಆ.16 ರಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ: ಸಿದ್ದರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಸತ್‌ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಇದೇ 16 ರಿಂದ ರಾಜ್ಯದಲ್ಲೂ ‘ಜನಾಶೀರ್ವಾದ ಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಒಟ್ಟು ನಾಲ್ಕು ತಂಡಗಳಲ್ಲಿ ಯಾತ್ರೆ ಸಂಚರಿಸಲಿದೆ ಎಂದರು.

ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌ ಮತ್ತು ಭಗವಂತ ಖೂಬಾ ಅವರ ನೇತೃತದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು161 ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಯಾತ್ರೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದ ಜನಪರ ಯೋಜನೆಗಳನ್ನು ಜನರಿಗೆ ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆ ನೀಡಲಾಗಿದೆ. ಈ ಯಾತ್ರೆ ಲಸಿಕಾ ಕೇಂದ್ರಗಳು, ಪಡಿತರ ಅಂಗಡಿಗಳು, ಸಾಹಿತಿಗಳು, ಯೋಧರು, ಗಣ್ಯ ವ್ಯಕ್ತಿಗಳು, ಜನಸಂಘ ಮತ್ತು ಬಿಜೆಪಿ ಹಿರಿಯ ನಾಯಕರ ಮನೆಗಳಿಗೂ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ ಎಂದರು.

ಕೋವಿಡ್‌ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವು ಎಂದೂ ಸಿದ್ದರಾಜು ತಿಳಿಸಿದರು.

ಇದನ್ನೂ ಓದಿ... ‘ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು