ಕಲಬುರಗಿ: ಕೊಡೇಕಲ್‌ನತ್ತ ಪ್ರಧಾನಿ ಮೋದಿ ಪಯಣ

ಕಲಬುರಗಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಯಾದಗಿರಿ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೇಕಲ್ ಗೆ ಪ್ರಯಾಣ ಬೆಳೆಸಿದರು.
ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ದೆಹಲಿಯಿಂದ ವಾಯುಪಡೆಯ ವಿಶೇಷ ವಿಮಾನದ ಮೂಲಕ 10.50ಕ್ಕೆ ಬಂದ ಪ್ರಧಾನಿ ಅವರು ಹೆಲಿಕಾಪ್ಟರ್ ಮೂಲಕ ಕೊಡೇಕಲ್ ನತ್ತ ಪ್ರಯಾಣ ಬೆಳೆಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳು ಸ್ವಾಗತಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.