ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೇತನವನ್ನು ಶೇ 5ರಿಂದ ಶೇ 15 ರಷ್ಟು ಹೆಚ್ಚಿಸಲಾಗಿದೆ.

ಈ ಬಗ್ಗೆ ಎನ್‌ಎಚ್‌ಎಂ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. 2020–21ನೇ ಸಾಲಿನಲ್ಲಿ ₹ 15 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುತ್ತಿದ್ದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ಮೊತ್ತವು ಅನುಮೋದನೆಗೊಂಡಿದೆ. 2021–22ನೇ ಸಾಲಿಗೆ ವಾರ್ಷಿಕ ಸಂಭಾವನೆ ಹೆಚ್ಚಳ ಮಾಡಲು ಅವಕಾಶವಿಲ್ಲ. ಒಂದು ವರ್ಷ ಪೂರೈಸಿದವರಿಗೆ ಶೇ 5ರಷ್ಟು ಹೆಚ್ಚುವರಿ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.

2021–22ನೇ ಸಾಲಿಗೆ ಅನ್ವಯವಾಗುವಂತೆ 3 ವರ್ಷ ಸೇವೆ ಪೂರೈಸಿದವರಿಗೆ ಶೇ 10 ರಷ್ಟು ಹಾಗೂ 5 ವರ್ಷ ಪೂರ್ಣಗೊಳಿಸಿದವರಿಗೆ ಶೇ 5 ರಷ್ಟು ಸೇವಾನುಭವ ಭತ್ಯೆಯನ್ನು ನೌಕರರಿಗೆ ಹಂಚಿಕೆ ಮಾಡುವಂತೆ ಸೂಚಿಸಿದ್ದಾರೆ.

ವಿವಿಧ ಯೋಜನೆಗಳಡಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಹಾಗೂಇಎಸ್ಐ ಸೌಲಭ್ಯ ನೀಡುವಂತೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.