ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ದೇಣಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸೋಮವಾರ ಮತ್ತೆ ವಿಚಾರಣೆ ನಡೆಸಿದರು.
ಈ ಪ್ರಕರಣದಲ್ಲಿ ನವೆಂಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರಿಗೆ ಇ.ಡಿ.ಸಮನ್ಸ್ ನೀಡಿತ್ತು. ವಿಚಾರಣೆಗೆ ಹಾಜರಾಗಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಶಿವಕುಮಾರ್ ಕೋರಿದ್ದರು. ಹಾಗಾಗಿ, ಕಳೆದ ಸೋಮವಾರ ವಿಚಾರಣೆಗೆ ಹಾಜರಾಗಿರಲಿಲ್ಲ. ಇ.ಡಿ. ಮತ್ತೆ ಸಮನ್ಸ್ ನೀಡಿತ್ತು. ಶಿವಕುಮಾರ್ ಅವರನ್ನು ಇ.ಡಿ. ಅಧಿಕಾರಿಗಳು ಸುಮಾರು ಮೂರು ಗಂಟೆ ವಿಚಾರಣೆ ನಡೆಸಿದರು.
ನ್ಯಾಷನಲ್ ಹೆರಾಲ್ಡ್‌ನ ಮಾತೃ ಸಂಸ್ಥೆಯಾದ ಯಂಗ್ ಇಂಡಿಯಾಲಿಮಿಟೆಡ್‌ಗೆ ಶಿವಕುಮಾರ್ ಮತ್ತುಸುರೇಶ್ ದೇಣಿಗೆ ನೀಡಿರುವ ಪ್ರಕರಣ ಇದಾಗಿದೆ.
ವಿಚಾರಣೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಶಿವಕುಮಾರ್, ‘ನನ್ನ ಹಾಗೂ ತಮ್ಮನಿಗೆ ಸಂಬಂಧಿಸಿದ ಮತ್ತಷ್ಟು ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ಕೇಳಿದ್ದಾರೆ. ಮೂರು ದಿನಗಳ ಒಳಗೆ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದಾರೆ’ ಎಂದರು.
’ಬಿಜೆಪಿಗೆ ಸೇರಲು ಒತ್ತಡ ಇದೆಯಾ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದ ಕುರಿತು ಮಾತನಾಡಲು ಹೋದರೆ ನನ್ನ ತಲೆ ಸುತ್ತುತ್ತದೆ. ಈಗ ಆ ವಿಚಾರದ ಬಗ್ಗೆ ಹೇಳುವುದಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.