ಸೋಮವಾರ, ಸೆಪ್ಟೆಂಬರ್ 27, 2021
28 °C

17ಕ್ಕೆ ಯುವ ಕಾಂಗ್ರೆಸ್‌ನಿಂದ ‘ರಾಷ್ಟ್ರೀಯ ನಿರುದ್ಯೋಗ ದಿನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಇದೇ 17ರಂದು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಲಾಗುವುದು’ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‌‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಗಂಭೀರವಾಗಿದೆ. ಯುವ ಜನರ ಆಕ್ರೋಶವನ್ನು ಪ್ರಧಾನಿವರೆಗೆ ತಲುಪಿಸಲು ಅಂದು ವ್ಯಾಪಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದರು.

‘ಅಂದು ಯುವಜನರು, ಯುವ ಕಾರ್ಯಕರ್ತರು ಟ್ವಿಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳ ಮೂಲಕ ಉದ್ಯೋಗ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಬೇಕು’ ಎಂದೂ ಮನವಿ ಮಾಡಿದರು.

‘ರಾಜ್ಯದಲ್ಲಿ ಒಂದೂವರೆ ವರ್ಷದಿಂದ 40 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವರಿಗೆ ವೇತನ ಕಡಿತವಾಗಿದೆ. ಗಾರ್ಮೆಂಟ್ಸ್‌ ನೌಕರರು, ಚಾಲಕರು, ಅಸಂಘಟಿತ ಕಾರ್ಮಿಕರು ಹೀಗೆ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಂಡು ಕಣ್ಣೀರಿನಲ್ಲಿ ಮುಳುಗಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.