ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ, ಚೆನ್ನೈ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ: ನಾಲ್ವರ ಬಂಧನ

ಎನ್‌ಸಿಬಿ ಕಾರ್ಯಾಚರಣೆ
Last Updated 29 ಸೆಪ್ಟೆಂಬರ್ 2020, 13:22 IST
ಅಕ್ಷರ ಗಾತ್ರ

ಬೆಂಗಳೂರು: ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

‘ಕೇರಳದ ಕೆ. ಪ್ರಮೋದ್, ಫಾಹಿಮ್, ಕರ್ನಾಟಕದ ಎ. ಹಶೀರ್ ಹಾಗೂ ಎಸ್‌.ಎಸ್‌. ಶೆಟ್ಟಿ ಬಂಧಿತರು. ಅವರು ಸಾಗಿಸುತ್ತಿದ್ದ 750 ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ಅಧಿಕಾರಿಗಳು ಜುಲೈನಲ್ಲಿ ಕಾರ್ಯಾಚರಣೆ ನಡೆಸಿ ಅಂಚೆ ಕಚೇರಿಗಳಲ್ಲಿ ಪಾರ್ಸೆಲ್ ಹೋಗುತ್ತಿದ್ದ ಡ್ರಗ್ಸ್ ಜಪ್ತಿ ಮಾಡಿದ್ದರು. ಡ್ರಗ್ಸ್ ಯಾರು ತರಿಸಿದ್ದರು ಎಂಬುದು ಆರಂಭದಲ್ಲಿ ಗೊತ್ತಿರಲಿಲ್ಲ. ಅದರ ಹೆಚ್ಚಿನ ತನಿಖೆ ಕೈಗೊಂಡಾಗಲೇ ಈ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.’

‘ಎರಡು ವರ್ಷಗಳಿಂದ ಈ ಗ್ಯಾಂಗ್ ಡ್ರಗ್ಸ್ ಮಾರಾಟ ಮಾಡುತ್ತಿತ್ತು. ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎನ್‌ಎಂಎಎಂಐಟಿ ಕಾಲೇಜು, ಮಣಿಪಾಲ್ ಕ್ಲಬ್‌ಗಳು, ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದೂ ಅಧಿಕಾರಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT