ಭಾನುವಾರ, ನವೆಂಬರ್ 27, 2022
26 °C

ಭಯೋತ್ಪಾದನೆ ನಿಗ್ರಹಕ್ಕೆ ದಕ್ಷಿಣ ರಾಜ್ಯಗಳ ಸಮನ್ವಯ ಅಗತ್ಯ: ಸಿಎಂ ಬೊಮ್ಮಾಯಿ

ಪ್ರಜಾ ವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಭಯೋತ್ಪಾದಕ ಕೃತ್ಯ ತಡೆಗಟ್ಟಲು ಸಂಘಟಿತ ಪ್ರಯತ್ನ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಮನ್ವಯ ಸಾಧಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಜಿಲ್ಲೆಯ ಮಾಯಗೊಂಡನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರತಿಕ್ರಿಯೆ ನೀಡಿ, ಅಪರಾಧಿಗಳು ಒಂದು ರಾಜ್ಯದಲ್ಲಿ ಕೃತ್ಯ ನಡೆಸಿ, ಇನ್ನೊಂದು ರಾಜ್ಯಕ್ಕೆ ಸುಲಲಿತವಾಗಿ ಹೋಗುತ್ತಾರೆ. ಇದೆಲ್ಲವನ್ನೂ ತಡೆಯಲು ದಕ್ಷಿಣದ ರಾಜ್ಯಗಳು ಕಠಿಣ ನಿಗಾ ವಹಿಸಬೇಕು. ಪರಸ್ಪರ ಸಹಕಾರ ನೀಡಬೇಕು ಎಂದರು. 

ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟ ಹಾಕಲು ಸರ್ಕಾರ ಸಮರ್ಥವಾಗಿದೆ. ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಲಾಗಿದೆ ಎಂದರು. 

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾವ ಸರ್ಕಾರದ ಸಂದರ್ಭದಲ್ಲಿ ಏನೇನು ಆಗಿದೆ ಎಂಬುದರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್‌ನವರು ಅದನ್ನು ಎದುರಿಸಲಿ. ಅದನ್ನು ಬಿಟ್ಟು ಇಲ್ಲದ ಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ ಎಂದರು. 

ಕಾಡಾನೆ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಕಾರ್ಯಪಡೆ ರಚಿಸಲಾಗಿದೆ. ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲಾಗುತ್ತಿದ್ದು, ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಗಂಭೀರ ಚಿಂತನೆ ಮಾಡುವುದಾಗಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು