ಮಂಗಳವಾರ, ನವೆಂಬರ್ 30, 2021
22 °C

ವದಂತಿ, ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವುದು ಬೇಡ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ‘ವದಂತಿ, ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಅವನ್ನೆಲ್ಲ ಹೇಗೆ ಎದುರಿಸಬೇಕೆಂಬ ಶಕ್ತಿಯನ್ನು ಭಗವಂತ ಕೊಟ್ಟಿದ್ದಾನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಚಿತ್ರದುರ್ಗಕ್ಕೆ ಹೋಗುವ ಮಾರ್ಗದಲ್ಲಿ ಗುರುವಾರ ನಗರದ ಬೈಪಾಸ್ ರಸ್ತೆಯಲ್ಲಿ ತಮ್ಮನ್ನು ಭೇಟಿಯಾಗಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

‘ವಿರೋಧಿಸುವವರು ಬೇರೆ ಪಕ್ಷಗಳಲ್ಲೂ ಇರಬಹುದು. ನಮ್ಮಲ್ಲೂ ಇರಬಹುದು. ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕು. ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಎಲ್ಲ ಆರೋಪಗಳಿಗೆ ತಕ್ಕ ಉತ್ತರ ಕೊಡೋಣ. ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳಿಂದ ಶೀಘ್ರದಲ್ಲಿಯೇ ಚುನಾವಣೆ ನಡೆಯಲಿದೆ. ತದನಂತರ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮ ಪಕ್ಷದ ಅಧಿಕಾರ ಸ್ಥಾಪಿಸುವತ್ತ ಹೆಚ್ಚಿನ ಗಮನ ಕೊಡಿ’ ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು