ಶುಕ್ರವಾರ, ಫೆಬ್ರವರಿ 26, 2021
19 °C

ಹೆಚ್ಚುತ್ತಿದೆ ಬ್ರಿಟನ್‌ ವೈರಸ್‌ ಸೋಂಕು; ರಾತ್ರಿ ಕರ್ಫ್ಯೂ ಅಗತ್ಯ: ಆರ್. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ರಿಟನ್ ನಿಂದ ಬಂದಿರುವ ರೂಪಾಂತರ ಹೊಂದಿರುವ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಕೋವಿಡ್ ನಿಯಂತ್ರಿಸಲು ಮತ್ತಷ್ಟು ನಿರ್ಬಂಧಗಳನ್ನು ಹೇರುವ ಅಗತ್ಯವಿದೆ. ರಾತ್ರಿ ಕರ್ಫ್ಯೂ ಜಾರಿ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಚರ್ಚಿಸಲಾಗುವುದು' ಎಂದರು.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಬೇಕಾದ ಪರಿಸ್ಥಿತಿ ಇಲ್ಲ. ಆದರೆ, ಜನರು ಎಚ್ಚರಿಕೆಯಿಂದ ಇರಲೇಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: 

ಬದಲಾವಣೆ ಇಲ್ಲ:
ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ, 'ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು. ಸದ್ಯಕ್ಕೆ ಯಾವುದೇ ಬದಲಾವಣೆ ಇರುವುದಿಲ್ಲ' ಎಂದರು. 

ಅಗತ್ಯ ಕಂಡುಬಂದಲ್ಲಿ ಮಾತ್ರ ಬದಲಾವಣೆ ಮಾಡಲಾಗುವುದು. ಸ್ಥಳೀಯ ಪರಿಸ್ಥಿತಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬ್ರಿಟನ್ ನಿಂದ ಬಂದಿರುವ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಅವರೆಲ್ಲರೂ ತಕ್ಷಣ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು