ಬೆಂಗಳೂರು: ವೈದ್ಯಕೀಯ (ನೀಟ್), ಎಂಜಿನಿಯರಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳ (ಸಿಇಟಿ) ಪ್ರವೇಶ ಪ್ರಕ್ರಿಯೆಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ದೋಷ, ಸರ್ವರ್ ಸಮಸ್ಯೆಗಳಿಂದಾಗಿ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗದೆ ಅಭ್ಯರ್ಥಿಗಳು ಹೈರಾಣಾಗಿದ್ದಾರೆ.
ಸಮಸ್ಯೆಗಳಿಂದ ಕಂಗಾಲಾಗಿ ಕರ್ನಾ ಟಕ ಪರೀಕ್ಷಾ ಪ್ರಾಧಿಕಾರದ ಸಹಾಯ ವಾಣಿಗಳಿಗೆ ಕರೆ ಮಾಡಿದರೂ, ಅಲ್ಲಿನ ಸಿಬ್ಬಂದಿ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಇದರಿಂದ ರಾಜ್ಯದ ಮೂಲೆಮೂಲೆಗಳಿಂದ ಅಭ್ಯರ್ಥಿಗಳು ಹಾಗೂ ಪೋಷಕರು ಮಲ್ಲೇಶ್ವರದ ಕೆಇಎ ಕಚೇರಿಗೆ ಎಡತಾಕುತ್ತಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಸರದಿ ಯಲ್ಲಿ ನಿಂತರೂ ಸಮಸ್ಯೆ ಬಗೆಹರಿದಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.