ಶುಕ್ರವಾರ, ಮಾರ್ಚ್ 5, 2021
26 °C

ನೇಕಾರರ ಅಭಿವೃದ್ಧಿ ನಿಗಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನೇಕಾರ ಸಮುದಾಯಗಳ ಬಹುಕಾಲದ ಬೇಡಿಕೆಯಾಗಿರುವ ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ‌ಸಮುದಾಯದ ಮುಖಂಡರನ್ನೊಳಗೊಂಡ ನಿಯೋಗವನ್ನು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿಗೆ ಕರೆದೊಯ್ಯಲಾಗುವುದು’ ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ತಿಳಿಸಿದರು.

ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ಅವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಈವರೆಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನೇಕಾರ ಸಮುದಾಯಕ್ಕೂ ನಿಗಮದ ಅಗತ್ಯ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಒತ್ತಾಯಿಸಿದರು.

ಒಕ್ಕೂಟದ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ, ‘ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ₹150 ಕೋಟಿಗೂ ಹೆಚ್ಚು ಹಣ ವ್ಯಯ ಮಾಡಿ ‘ಜಾತಿಗಣತಿ ವರದಿ’ ಸಿದ್ಧಪಡಿಸಿದ್ದರು. ಆ ವರದಿಯನ್ನು ಈಗಿನ ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.

ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ,‘ನೇಕಾರರನ್ನು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ನೇಕಾರ ಸಮುದಾಯಗಳ ಒಕ್ಕೂಟವು ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ರಾಜ್ಯಸಭಾ ಸದಸ್ಯ ಕೆ.ನಾರಾಯಣ್,‘ಸಮಾಜದಿಂದ ಪಡೆಯುವ ಯಾವುದೇ ಲಾಭದಲ್ಲಿ ಒಂದಿಷ್ಟು ಹಣವನ್ನು ಸಮಾಜದ ಅಭಿವೃದ್ಧಿಗಾಗಿ ನೀಡುವುದು ಮನುಷ್ಯ ಧರ್ಮ’ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು