ಮುಂದಿನ ವರ್ಷದಿಂದ ‘ಎನ್ಇಪಿ’ ಅಡಿ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವ ಬಿ.ಸಿ.ನಾಗೇಶ

ಕಾರವಾರ: 'ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ 20 ಸಾವಿರ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಅರ್ಲಿ ಚೈಲ್ಡ್ ಎಜುಕೇಷನ್ ಸಿಸ್ಟಮ್- ನರ್ಸರಿಯಿಂದ ಎರಡನೇ ತರಗತಿ) ಶಿಕ್ಷಣ ನೀಡಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಜನ ಸಾಮಾನ್ಯರ ಮಕ್ಕಳಿಗೆ ಯಾವುದೇ ಹೊರೆಯಿಲ್ಲದ ಶಿಕ್ಷಣ ನೀಡಬೇಕು ಎಂಬುದು ಉದ್ದೇಶವಾಗಿದೆ' ಎಂದು ಹೇಳಿದರು.
'ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಲು ನಿವೃತ್ತ ಐ.ಎ.ಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ 26 ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಮೂಲಕ ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಪ್ರತಿ.ಜಿಲ್ಲೆಗೆ ಬೇಕಾದ ಕೌಶಲವನ್ನು ಒಳಗೊಂಡ ಪಠ್ಯಕ್ರಮ ಜಾರಿಗೆ ಸಿದ್ಧತೆ ನಡೆದಿದೆ' ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.