Covid-19 Karnataka Update: ಸಕ್ರಿಯ ಪ್ರಕರಣ 65 ಸಾವಿರಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 65,312 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಹೊಸದಾಗಿ 3,203 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.56 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 2.05 ರಷ್ಟು ವರದಿಯಾಗಿದೆ. ಬೆಂಗಳೂರಿನಲ್ಲಿ 676 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500 ರ ಗಡಿಯೊಳಗಡೆ ಇವೆ. ಈ ಸಂಖ್ಯೆ 16 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.47 ಲಕ್ಷ ದಾಟಿದೆ.
ಇದನ್ನೂ ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ
ಕೊರೊನಾ ಸೋಂಕಿತರಲ್ಲಿ 94 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 2.93 ರಷ್ಟು ವರದಿಯಾಗಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 18, ದಕ್ಷಿಣ ಕನ್ನಡದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 35,134ಕ್ಕೆ ತಲುಪಿದೆ.
ಸೋಂಕಿತರಲ್ಲಿ 14,302 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 27.46 ಲಕ್ಷ
ದಾಟಿದೆ.
ಇಂದಿನ 01/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/OaCvXIMBqB
@CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/X7HJf2HJUI
— K'taka Health Dept (@DHFWKA) July 1, 2021
ಇದನ್ನೂ ಓದಿ: ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ: ಅಶ್ವತ್ಥನಾರಾಯಣ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.