ಮಂಗಳವಾರ, ಸೆಪ್ಟೆಂಬರ್ 21, 2021
28 °C

ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು; ಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು (ಮಂಗಳವಾರ) ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ನಗರದ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸುಸೂತ್ರ ಆಯ್ಕೆ ಪ್ರಕ್ರಿಯೆಗಾಗಿ ದೆಹಲಿಯಿಂದ ವೀಕ್ಷಕರಾಗಿ ಬರುವ ಕೇಂದ್ರ ಸಚಿವರಾದ ಕಿಶನ್‌ ರೆಡ್ಡಿ ಮತ್ತು ಧರ್ಮೇಂದ್ರ ಪ್ರಧಾನ್‌ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಹೊಸ ಮುಖ್ಯಮಂತ್ರಿ ಆಯ್ಕೆಗೆ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಹೆಸರು ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ. ರಾತ್ರಿ 7.30 ಕ್ಕೆ ಈ ಸಭೆ ನಡೆಯಲಿದೆ.

ಆಯ್ಕೆ ಪ್ರಕ್ರಿಯೆ ಬೇಗನೆ ಮುಗಿಸಿ ಗುರುವಾರದ ವೇಳೆಗೆ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇವನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು