ಶನಿವಾರ, ಮೇ 15, 2021
26 °C

ಹೊಸ ಸ್ಮಶಾನ ಸಿದ್ಧತೆ: ಸಚಿವರ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ತಾವರೆಕೆರೆ ಗ್ರಾಮದ ಬಳಿ ನಿರ್ಮಿಸುತ್ತಿರುವ ಸ್ಮಶಾನದ ಸಿದ್ಧತಾ ಕಾರ್ಯವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್‌.ಅಶೋಕ ಗುರುವಾರ ರಾತ್ರಿ ಪರಿಶೀಲಿಸಿದರು.

ಸುಮಾರು 50 ಎಕರೆ ಪ್ರದೇಶದಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು, ಏಕ ಕಾಲಕ್ಕೆ 20 ಶವಗಳ ದಹನ ಮಾಡಬಹುದಾಗಿದೆ. ಇಲ್ಲಿ ಬೋರ್‌ವೆಲ್‌ ಸೇರಿದಂತೆ ಅಗತ್ಯ ವ್ಯವಸ್ಥೆಯನ್ನು
ಮಾಡಲಾಗಿದೆ. ನಗರದ ವಿದ್ಯುತ್‌ ಚಿತಾಗಾರಗಳ ಮೇಲೆ ಒತ್ತಡ ಹೆಚ್ಚಾಗಿರುವುದರಿಂದ ಈ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಶವಗಳ ದಹನ ಕಾರ್ಯ ನಡೆಯಲಿದೆ. ಇದಕ್ಕಾಗಿ ಸುಮಾರು 100 ಟನ್‌ಗೂ ಅಧಿಕ ಸೌಧೆಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.