ಗುರುವಾರ , ಫೆಬ್ರವರಿ 25, 2021
20 °C

ಕೊಡಗಿಗೆ ಚಾರುಲತಾ ಸೋಮಲ್‌ ನೂತನ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಜಿಲ್ಲಾಧಿಕಾರಿ ಆಗಿ‌ ಕಾರ್ಯ ನಿರ್ವಹಿಸುತ್ತಿದ್ದ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. 

ಚಾರುಲತಾ ಸೋಮಲ್, ಈ ಹಿಂದೆ ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. ಮತ್ತೆ ಕೊಡಗು ಜಿಲ್ಲೆಗೇ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾಧಿಕಾರಿ ಆಗಿದ್ದ ಅನೀಸ್‌ ಕಣ್ಮಣಿ ಜಾಯ್‌ ಅವರು, ಸುದೀರ್ಘ ರಜೆಯ ಮೇಲೆ ವಿದೇಶಕ್ಕೆ ತೆರಳಿದ್ದು ಅವರ ಜಾಗಕ್ಕೆ ಚಾರುಲತಾ ಸೋಮಲ್‌ ನೇಮಕವಾಗಿದೆ.

ಚಾರುಲತಾ ಅವರು ಸಿಇಒ ಆಗಿದ್ದ ವೇಳೆ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ ನ್ಯಾಯಾಲಯ ಸಂಕೀರ್ಣಕ್ಕೆ ಜಾಗ ಒದಗಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಇದೀಗ ನಗರದ ಹೊರ ವಲಯದಲ್ಲಿ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು