ಮಂಗಳವಾರ, ಮಾರ್ಚ್ 28, 2023
31 °C

ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಅವರು ಭಾನುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ‌ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಿದರು. ಗೆಹಲೋತ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಗೆಹಲೋತ್ ಅವರು ರಾಜ್ಯದ 19ನೇ ರಾಜ್ಯಪಾಲರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅವರನ್ನು ರಾಜ್ಯದ ನೂತನ ರಾಜ್ಯಪಾಲರನ್ನಾಗಿ ನೇಮಕ‌ ಮಾಡಲಾಗಿತ್ತು.


ಥಾವರಚಂದ್ ಗೆಹಲೋತ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು