ಬುಧವಾರ, ಡಿಸೆಂಬರ್ 2, 2020
25 °C

ಪಿಯು ಕಾಲೇಜು ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2020–21) ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಶಿಕ್ಷಣ ಸಂಸ್ಥೆ ಅಥವಾ ಟ್ರಸ್ಟ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹ ಶಿಕ್ಷಣ ಸಂಸ್ಥೆಗಳು ಇಲಾಖೆಯ ವೆಬ್‌ಸೈಟ್‌ www.puc.kar.nic.inನಲ್ಲಿ ಲಾಗಿನ್ ಆಗಿ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಸೆ.16ರೊಳಗೆ ಸಂಸ್ಥೆ ಅಥವಾ ಟ್ರಸ್ಟ್‌ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ. 

₹50 ಸಾವಿರ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಎಲ್ಲ ಪ್ರಕ್ರಿಯೆಗಳನ್ನು ಆನ್‌ಲೈನ್‌ನಲ್ಲಿಯೇ ನಡೆಸಲಾಗುತ್ತದೆ ಎಂದು ಹೇಳಿದೆ. ಹೆಚ್ಚಿನ ಮಾಹಿತಿಗೆ, ಇಲಾಖೆಯ ವೆಬ್‌ಸೈಟ್‌ ಸಂಪರ್ಕಿಸಬಹುದು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು