ಗುರುವಾರ , ಫೆಬ್ರವರಿ 25, 2021
19 °C

ಅಕ್ರಮ ಗಣಿ ಸಕ್ರಮಕ್ಕೆ ಹೊಸ ನಿಯಮ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಅಕ್ರಮ ಗಣಿಗಳನ್ನು ಸಕ್ರಮಗೊಳಿಸಲು ಹೊಸ ನಿಯಮ ಜಾರಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸಲು ಜ. 27 ಮತ್ತು 28ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ' ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

‘ಎಲ್ಲ ಅಕ್ರಮ ಗಣಿಗಳನ್ನು ಸಕ್ರಮ ಮಾಡುವುದಿಲ್ಲ. ಹೊಸ ಮಾರ್ಗಸೂಚಿಗೆ ಅನುಗುಣವಾಗಿದ್ದರೆ ಮಾತ್ರ ಅಕ್ರಮ ಗಣಿಗಳನ್ನು ಸಕ್ರಮ ಮಾಡುತ್ತೇವೆ. ಇದೆಲ್ಲವೂ ಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಅಕ್ರಮ ಗಣಿಗಾರಿಕೆ ತಡೆಗೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕಾಯ್ದೆ ಜಾರಿ ಮಾಡಿದ್ದಾರೆ ಎಂಬುದನ್ನು ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿಯೂ ಹೊಸ ಗಣಿ ಕಾಯ್ದೆ ಜಾರಿಗೊಳಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

‘ದೇಶದಾದ್ಯಂತ ಹಲವಾರು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ’ ಎಂದೂ ಅವರು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು