ಸೋಮವಾರ, ಮಾರ್ಚ್ 20, 2023
24 °C

ಪರೀಕ್ಷಾ ಮಂಡಳಿಗೆ ನೂತನ ಜಾಲತಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೂತನ ಜಾಲತಾಣವನ್ನು ರೂಪಿಸಿದ್ದು, ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು http://kseab.karnataka.gov.in ಸಂಪರ್ಕಿಸಬಹುದು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಒಟ್ಟುಗೂಡಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಸ್ತಿತ್ವಕ್ಕೆ ತರಲಾಗಿದೆ. ಇದುವರೆಗೂ ಹಳೆಯ ಜಾಲತಾಣವನ್ನೇ ಬಳಸಲಾಗುತ್ತಿತ್ತು. ಜ.10ರಿಂದ ಹೊಸ ಜಾಲತಾಣ ತೆರೆದಿದೆ.

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಯ ಚಟುವಟಿಕೆಗಳ ಆನ್‌ಲೈನ್‌ ಕಾರ್ಯಗಳು, ಶಾಲಾ ಲಾಗಿನ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿಗಳ ಲಾಗಿನ್‌ ಹಾಗೂ ಇತರೆ ಸೇವೆಗಳು ನೂತನ ಜಾಲತಾಣದಲ್ಲೇ ಸಿಗಲಿವೆ ಎಂದು ಪರೀಕ್ಷಾ ವಿಭಾಗದ ನಿರ್ದೇಶಕ ಎಚ್‌.ಎನ್‌.ಗೋ‍ಪಾಲಕೃಷ್ಣ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು