ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್‌ ಟೋಲ್‌ ಪ್ಲಾಜಾ ತೆರವಿಗೆ ಒಪ್ಪಿಗೆ: ಸಚಿವ ಸಿ.ಸಿ. ಪಾಟೀಲ

Last Updated 15 ಸೆಪ್ಟೆಂಬರ್ 2022, 15:50 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರಿನ ಸುರತ್ಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್‌ ಸಂಗ್ರಹ ಕೇಂದ್ರ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್‌, ‘ಮಂಗಳೂರಿನಲ್ಲಿ 60 ಕಿ.ಮೀ. ಅಂತರದಲ್ಲಿ ಮೂರು ಟೋಲ್‌ ಕೇಂದ್ರಗಳಿವೆ. ಸುರತ್ಕಲ್‌ ಟೋಲ್‌ ಪ್ಲಾಜಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಯುತ್ತಿದೆ. ತಕ್ಷಣ ಟೋಲ್‌ ಪ್ಲಾಜಾ ತೆರವು ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿದ ಸಚಿವರು, ‘60 ಕಿ.ಮೀ. ಅಂತರದೊಳಗೆ ಇರುವ ಟೋಲ್‌ ಸಂಗ್ರಹಣಾ ಕೇಂದ್ರಗಳನ್ನು ತೆರವುಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ. ಈ ಕಾರಣದಿಂದ ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಎನ್‌ಎಚ್‌ಎಐಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದನ್ನು ಪ್ರಾಧಿಕಾರ ಒಪ್ಪಿಕೊಂಡಿದೆ’ ಎಂದರು.

ಸುರತ್ಕಲ್‌ ಬಳಿ ನವಯುಗ ಕನ್‌ಸ್ಟ್ರಕ್ಷನ್ಸ್‌ ಮತ್ತು ನವ ಮಂಗಳೂರು ಬಂದರು ರಸ್ತೆ ಕಂಪನಿಗಳು ರಸ್ತೆ ನಿರ್ಮಿಸಿವೆ. ಈ ಕಾರಣದಿಂದಾಗಿ 60 ಕಿ.ಮೀ. ಅಂತರದ ಮಧ್ಯದಲ್ಲಿ ಟೋಲ್‌ ಸಂಗ್ರಹಣಾ ಕೇಂದ್ರ ತೆರೆಯಲಾಗಿತ್ತು. ಇದು ಅನಧಿಕೃತ ಟೋಲ್‌ ಪ್ಲಾಜಾ ಅಲ್ಲ. ಈಗ ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT