ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನೀರು: NHAI ಸರಿ ಮಾಡಲಿದೆ- ಎಂದ ಸಿ.ಎಂ

Last Updated 18 ಮಾರ್ಚ್ 2023, 7:34 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ (ಚಾಮರಾಜನಗರ): ರಾಮನಗರದ ಬಳಿ ಮೈಸೂರು- ಬೆಂಗಳೂರು ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಉಂಟಾಗಿರುವ ಸಮಸ್ಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರಿ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಳೆ ಬಂದಾಗ ಸಣ್ಣ ಪುಟ್ಟ ಸಮಸ್ಯೆಗಳಾಗುವುದು ಸಹಜ. ಪ್ರಾಧಿಕಾರ ಅದನ್ನು ಸರಿ ಪಡಿಸಲಿದೆ' ಎಂದರು.

ಎನ್ ಎಚ್ ಎಂ (ರಾಷ್ಟ್ರೀಯ ಆರೋಗ್ಯ ಯೋಜನೆ) ನೌಕರರ ಮುಷ್ಕರದ ಬಗ್ಗೆ ‌ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, 'ನೌಕರರಿಗೆ ಸೇವಾ ಷರತ್ತುಗಳಿರುತ್ತವೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎಂಬುದು ನಮ್ಮ ಉದ್ದೇಶ. ಅಧಿಕಾರಿಗಳಿಗೆ ತಿಳಿಸಿದ್ದೇನೆ. ಒಂದೆರಡು ದಿನದಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ' ಎಂದರು.

ಬಿಎಸ್ ವೈ ಗೈರು: ಮಹದೇಶ್ವರ ಸ್ವಾಮಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಿಜೆಪಿ ಸಂಸದೀಯ‌ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗೈರಾಗಿರುವ ಬಗ್ಗೆ ಕೇಳಿದ್ದಕ್ಕೆ, 'ಅವರು ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಇಲ್ಲಿಗೆ ಬಂದಿಲ್ಲ' ಎಂದು ಪ್ರತಿಕ್ರಿಯಿಸಿದರು.

ಉರಿಗೌಡ, ನಂಜೇಗೌಡ ವಿವಾದದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಮುಖ್ಯಮಂತ್ರಿಯವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT