ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಐಎ ವಶದಲ್ಲಿದ್ದ ಸಮಯ ಅತ್ಯಂತ ಆಘಾತಕಾರಿ: ಸಚಿನ್ ವಾಜೆ

Last Updated 30 ನವೆಂಬರ್ 2021, 15:51 IST
ಅಕ್ಷರ ಗಾತ್ರ

ಮುಂಬೈ:‘ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಶದಲ್ಲಿದ್ದ ಸಮಯ ಬದುಕಿನಲ್ಲೇ ಅತ್ಯಂತ ಆಘಾತಕಾರಿಯಾಗಿತ್ತು’ ಎಂದು ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಮಂಗಳವಾರ ವಿಚಾರಣಾ ಆಯೋಗದ ಮುಂದೆ ಹೇಳಿಕೊಂಡಿದ್ದಾರೆ. ಎನ್‌ಐಎ ವಶದಲ್ಲಿದ್ದಾಗ ಹಲವು ದಾಖಲೆಗಳಿಗೆ ಬಲವಂತವಾಗಿ ಸಹಿ ಹಾಕಿಸಿಕೊಂಡಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.

ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ವಾಹನವೊಂದರಲ್ಲಿ ಸ್ಫೋಟಕ ಪತ್ತೆಯಾದ ಪ್ರಕರಣ ಹಾಗೂ ವಾಹನದ ಮಾಲೀಕ ಮನ್‌ಸುಖ್‌ ಹಿರೇನ್‌ ಶಂಕಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಾಜೆ ಅವರನ್ನು ಬಂಧಿಸಿತ್ತು.

ಎನ್‌ಐಎ ವಶದಲ್ಲಿದ್ದ 28 ದಿವಸಗಳ ಕಾಲ ಕಿರುಕುಳ ನೀಡಲಾಗಿತ್ತು ಎಂದೂ ಆರೋಪಿಸಿರುವ ವಾಜೆ, ಪಂಚನಾಮೆ ಮತ್ತು ದಾಖಲೆಗಳ ಪ್ರತಿಯನ್ನು ನೀಡಬೇಕೆಂಬ ತಮ್ಮ ಕೋರಿಕೆಯನ್ನು ಎನ್‌ಐಎ ನ್ಯಾಯಾಲಯ ತಿರಸ್ಕರಿಸಿದೆ ಎಂದೂ ಅವರು ವಿಚಾರಣಾ ಆಯೋಗದ ಮುಂದೆ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್‌ ದೇಶಮುಖ್‌ ಅವರ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಂಬೀರ್‌ ಸಿಂಗ್‌ ಮಾಡಿರುವ ಭ್ರಷ್ಟಾಚಾರ ಆರೋಪದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಕೆ.ಯು. ಚಾಂಡಿವಾಲ್‌ ಆಯೋಗವು ಸಚಿನ್ ವಾಜೆ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಬುಧವಾರವೂ ವಿಚಾರಣೆ ಮುಂದುವರಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT