ಗುರುವಾರ , ಆಗಸ್ಟ್ 11, 2022
23 °C

ಡಿ.ಜೆ.ಹಳ್ಳಿ ಗಲಭೆ: ಎನ್‌ಐಎ ತನಿಖೆ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಡಿ.ಜೆ. ಹಳ್ಳಿ ಗಲಭೆ ಸಂಬಂಧ ಎರಡು ಪ್ರಕರಣಗ ಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸುವ ಸಾಧ್ಯತೆ ಇದೆ’ ಎಂದು ಎನ್‌ಐಎ ಪರ ವಕೀಲರು ಹೈಕೋರ್ಟ್‌ಗೆ ಶುಕ್ರವಾರ ಮಾಹಿತಿ ನೀಡಿದರು.

ಗಲಭೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ (ಯುಎಪಿಎ) ದಾಖಲಾಗಿರುವ ಪ್ರಕರಣಗಳನ್ನು ಎನ್‌ಐಎಗೆ ವರ್ಗಾಯಿಸುವ ಬಗ್ಗೆ ಮೌಖಿಕ ಸೂಚನೆ ದೊರೆತಿದೆ. ಸೆ.18ರೊಳಗೆ ಆದೇಶ ಹೊರ ಬೀಳುವ ಸಾಧ್ಯತೆ ಇದೆ’ ಎಂದು ವಿಶೇಷ ಪಬ್ಲಿಕ್ ಪ್ಯಾಸಿಕ್ಯೂಟರ್ ಪ್ರಸನ್ನಕುಮಾರ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು