ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಓಮೈಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದು, ನಿಯಮಗಳನ್ನು ಜಾರಿ ಮಾಡಲು ಶ್ರಮಿಸುತ್ತಿದ್ದಾರೆ.

ಇನ್ನುನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಕಬ್ಬನ್ ಪಾರ್ಕ್ ಪೊಲೀಸರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಹೋಟೆಲ್ ಪಬ್ ಗಳನ್ನು ಮುಚ್ಚಿಸುತ್ತಿರುವ ದೃಶ್ಯ ಕಂಡುಬಂತು.

ಎಚ್ಚರ ತಪ್ಪಿದರೆ ಪ್ರಕರಣ ದಾಖಲು

ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದ್ದು, ಇದೇ 28ರಿಂದ 2022ರ ಜನವರಿ 7ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂ: ರಾತ್ರಿ ವೇಳೆ ಓಡಾಡಬೇಕಿದ್ದರೆ ಈ ಅಂಶಗಳ ಬಗ್ಗೆ ಗಮನವಿರಲಿ...

‘ಸರ್ಕಾರದ ಆದೇಶದಂತೆಯೇ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಆಸ್ಪತ್ರೆ ಸೇರಿದಂತೆ ಇತರೆ ತುರ್ತು ಕಾರ್ಯಗಳಿಗಾಗಿ ಮನೆಯಿಂದ ಹೊರ ಬರುವವರು ಗಸ್ತಿನಲ್ಲಿರುವ ಪೊಲೀಸರಿಗೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವವರೂ ಗುರುತಿನ ಚೀಟಿ ಹೊಂದಿರಬೇಕು. ಬಸ್, ರೈಲು ಹಾಗೂ ವಿಮಾನಗಳ ಮೂಲಕ ನಗರದಿಂದ ಬೇರೆ ಊರುಗಳಿಗೆ ಹೋಗುವವರು ಕೂಡ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸುವುದು ಅನಿವಾರ್ಯ’ ಎಂದು ಸೋಮವಾರ ಇಲ್ಲಿ ಹೇಳಿದ್ದಾರೆ.

‘ಪಬ್, ಹೋಟೆಲ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ 50ರಷ್ಟು ಮಂದಿಗೆ ಅವಕಾಶವಿದೆ. ಅಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ನಿಯಮ ಉಲ್ಲಂಘಿಸುವ ಪಬ್, ರೆಸ್ಟೋರೆಂಟ್ ಹಾಗೂ ಹೋಟೆಲ್ಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದಿದ್ದಾರೆ.

‘ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾನಗರದಲ್ಲಿ ಹೊಸವರ್ಷ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಈ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನೂ ಬಂದ್ ಮಾಡಲಾಗುತ್ತದೆ. ಜೊತೆಗೆ ಎಲ್ಲೆಡೆಯೂ ಈಗಾಗಲೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗುತ್ತದೆ. ಈ ರಸ್ತೆಗಳಲ್ಲಿ ಸಂಚರಿಸುವವರನ್ನೆಲ್ಲಾ ಪೊಲೀಸರು ತಪಾಸಣೆ ನಡೆಸಲಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೋವಿಡ್ ಮಾರ್ಗಸೂಚಿಯಲ್ಲಿ ಪರಿಷ್ಕರಣೆ: ಹೋಟೆಲ್ ಮಾಲೀಕರಿಗೆ ಸಿಹಿ ಸುದ್ದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.