ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.11 ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

Last Updated 27 ಸೆಪ್ಟೆಂಬರ್ 2021, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ‘ರಾತ್ರಿ ಕರ್ಫ್ಯೂ’ ವನ್ನು ಅಕ್ಟೋಬರ್‌ 11 ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆದೇಶದ ಅನ್ವಯ ಸೋಮವಾರ(ಸೆ.27) ಬೆಳಿಗ್ಗೆ 5 ಗಂಟೆಗೆ ‘ರಾತ್ರಿ ಕರ್ಫ್ಯೂ’ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ
ಹೊಸ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ರಾತ್ರಿ 10
ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿ ಯಲ್ಲಿರುತ್ತದೆ.

ಈ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ಈಗಾಗಲೇ ಸೂಚಿಸಿರುವ ಚಟುವಟಿಕೆಗಳನ್ನು ಬಿಟ್ಟು ಉಳಿದ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧವಿರುತ್ತದೆ. ರಾತ್ರಿ 10 ರ ಬಳಿಕ ಓಡಾಟ‌ಕ್ಕೆ ಅವಕಾಶ ಇರುವುದಿಲ್ಲ. ಸಾಲು ಸಾಲು ಹಬ್ಬಗಳು ಬರುವುದರಿಂದ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆ ಆಗಬಾರದು ಎಂಬ ಕಾರಣಕ್ಕೆ ಕರ್ಫ್ಯೂ ಮುಂದುವರಿಕೆ ಅಗತ್ಯವಿದೆ ಎಂದು ಈ ಆದೇಶದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ತಿಳಿಸಿದ್ದಾರೆ.

ಅ.3 ರಿಂದ ಪಬ್‌ಗಳನ್ನು ತೆರೆಯಲು ಅನುಮತಿ ನೀಡಿದ್ದು, ಕೋವಿಡ್‌ ನಿಯಮಾವಳಿಗಳಿಗೆ ಅನುಸಾರವೇ ಕಾರ್ಯ ನಿರ್ವಹಿಸಬೇಕು. ರಾತ್ರಿ ಕರ್ಫ್ಯೂವನ್ನೂ ಪಾಲಿಸಬೇಕು. ಕೋವಿಡ್‌ ಪ್ರಕರಣಗಳು ಹೆಚ್ಚು ಇರುವ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT