ಬೆಂಗಳೂರು: ಏಳು ಜಿಲ್ಲೆಗಳು ಮತ್ತು ಮಣಿಪಾಲದಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ, ಏಪ್ರಿಲ್ 20ರಂದು ಕರ್ಫ್ಯೂ ವಿಸ್ತರಣೆಯ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಕೋವಿಡ್–19 ಪರಿಸ್ಥಿತಿಗೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ತುರ್ತು ಸಭೆ ಕರೆದಿದ್ದ ಯಡಿಯೂರಪ್ಪ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

'ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ, ಈ ಬಗ್ಗೆ ನಾವು ಸಮಗ್ರ ಚರ್ಚೆ ಮಾಡಿದ್ದೇವೆ ಹಾಗೂ ಮಾಹಿತಿಯನ್ನು ಸಂಗ್ರಹಿಸಿದ್ದೇವೆ. ಏಪ್ರಿಲ್ 20ರ ವರೆಗೂ ಬೆಂಗಳೂರು ಸೇರಿ ಇತರೆ ಜಿಲ್ಲೆಗಳಲ್ಲಿ ವಿಧಿಸಿರುವ ರಾತ್ರಿ ಕರ್ಫ್ಯೂ ನಿರ್ಬಂಧಗಳು ಮುಂದುವರಿಯಲಿವೆ. ಬೇರೆ ಜಿಲ್ಲೆಗಳಿಗೆ ಕರ್ಪ್ಯೂ ವಿಸ್ತರಿಸುವ ಬಗ್ಗೆ 20 ರಂದು ಸಭೆ ನಡೆಸಿ ತೀರ್ಮಾನ ಮಾಡಲಾಗುವುದು' ಎಂದರು.

'ತಜ್ಞರ ಸಮಿತಿ ನೀಡಿರುವ ವರದಿ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗಿದೆ. ಕರ್ನಾಟಕವನ್ನು ಇತರೆ ರಾಜ್ಯಗಳಿಗೆ ಹೋಲಿಸುವುದು ಸರಿಯಲ್ಲ. ಇಲ್ಲಿನ ಪರಿಸ್ಥಿತಿಯೇ ಬೇರೆ ಇದೆ, ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ' ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಏಪ್ರಿಲ್ 10ರಿಂದ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ–ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಯಾಗಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.

ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ– Covid-19 India Update: ಸತತ 2ನೇ ದಿನ ದೇಶದಲ್ಲಿ ಎರಡು ಲಕ್ಷಕ್ಕೂ ಅಧಿಕ ಪ್ರಕರಣ

ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು:

1. ಕಾರ್ಪೋರೇಟ್ ವಲಯದ ಆಸ್ಪತ್ರೆಗಳು ತಮ್ಮ ಹತ್ತಿರದ ಹೋಟೆಲ್ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ವಹಿಸುವುದು.
2. ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು.
3. ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
4. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
5. ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
6. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
7. ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಐ.ಪಿ.ಎಸ್. ಮತ್ತು ಐ.ಎ.ಎಸ್. ಅಧಿಕಾರಿಗಳನ್ನು ಹಾಗೂ ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು.
8. ಕೊರೋನಾ ವೈರಸ್ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕೊರೋನಾ ಲಕ್ಷಣಗಳಿಲ್ಲದ ರೋಗಿಗಳಿಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ ಅಗತ್ಯವಿರುವಷ್ಟು ದಿನಗಳು ಮಾತ್ರ ರೋಗಿಗಳನ್ನು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಗುಣಮುಖರಾದ ಕೂಡಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದು.
9. ರಾಜ್ಯದಲ್ಲಿ ಸದ್ಯಕ್ಕೆ ರೆಮ್ಡೆಸಿವಿರ್ (Remdesivir) ಔಷಧ ಕೊರತೆ ಇರುವುದಿಲ್ಲ. ಆದಾಗ್ಯೂ ಹೆಚ್ಚುವರಿ ಡೋಸ್ಗಳ ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್ಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವುದು.
10. ಪ್ರಸಕ್ತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ. ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್ಗಳ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು.
11. ಪದೇ ಪದೇ ಆಕ್ಸಿಜನ್ ಸಿಲಿಂಡರ್ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್ಗಳನ್ನು ಖರೀದಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
12. ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಅದೇ ರೀತಿಯಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಕರೆದಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಕೈಗೊಳ್ಳುವುದು.
13. ಫ್ರಂಟ್ಲೈನ್ ವರ್ಕರ್ಗಳಾದ ವೈದ್ಯರು, ನರ್ಸ್ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕೂಡಲೇ ಕ್ರಮ ಕೈಗೊಳ್ಳುವುದು.
14. ರಾಜ್ಯಾದ್ಯಂತ ಕಾಟ್ಯಾಂಕ್ಟ್ ಟ್ರೇಸಿಂಗ್ ತ್ವರಿತಗೊಳಿಸುವುದು.
15. ಹೋಮ್ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕಲು ಕ್ರಮ ಕೈಗೊಳ್ಳುವುದು.
16. ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಫಲಿತಾಂಶವು (ಟೆಸ್ಟ್ ರಿಪೋರ್ಟ) 24 ಗಂಟೆಯೊಳಗಾಗಿ ತಪ್ಪದೇ ಲಭ್ಯವಾಗುವಂತೆ ಕ್ರಮವಹಿಸಲಾವುದು ಮತ್ತು ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕೂಡಲೇ ಅಗತ್ಯ ಕ್ರಮ ವಹಿಸುವುದು.
17. ಕಂಟೈನ್ಮೆಂಟ್ ಝೋನ್ಗಳನ್ನು ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.
18. ಅನಗತ್ಯವಾಗಿ ಜನ ಗುಂಪು ಸೇರುವುದನ್ನು ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳುವುದು.
19. ಬೇಡಿಕೆಗನುಗುಣವಾಗಿ ಉಚಿತವಾಗಿ 108 ಸೇರಿದಂತೆ ಅಗತ್ಯ ಆಂಬುಲೆನ್ಸ್ಗಳನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೆಂದ್ರಗಳಲ್ಲೂ ಲಭ್ಯವಿರುವಂತೆ ನೋಡಿಕೊಳ್ಳುವುದು.
20. ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬ್ಯುಲೆನ್ಸ್ಗಳನ್ನು ಕೋವಿಡ್ ರೋಗಿಗಳಿಗೋಸ್ಕರ ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.
21. ಬೆಂಗಳೂರು ನಗರದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಸಾಗಿಸಲು 49 ಆಂಬ್ಯುಲೆನ್ಸ್ಗಳನ್ನು ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.
22. ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಅಂತ್ಯ ಕ್ರಿಯೆಯನ್ನು ಚಿತಾಗಾರಗಳಲ್ಲಿ ಉಚಿತವಾಗಿ ನೆರವೇರಿಸುವುದು.
23. ಬಿ.ಬಿ.ಎಂ.ಪಿ. ಯು ತನ್ನ ಎಲ್ಲಾ ವಲಯಗಳ ಮತ್ತು ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸಿ ಕೋವಿಡ್ ರೋಗಿಗಳ ಸಹಾಯಕ್ಕೆ ಸದಾ ಬದ್ಧರಾಗಿರುವಂತೆ ಕ್ರಮ ವಹಿಸುವುದು ಹಾಗೂ ಸಹಾಯವಾಣಿಗಳಿಗೆ ನುರಿತ ವ್ಯಕ್ತಿಗಳನ್ನು ನೇಮಿಸಿ ಸದೃಢಗೊಳಿಸುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.