ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಪೊಲೀಸರು, ಉಪ ಪ್ರಾಂಶುಪಾಲ ಮತ್ತು ಅವರ ಪುತ್ರ ಸೇರಿದಂತೆ ಒಟ್ಟು 9 ಮಂದಿ ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ನಾಲ್ವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆದಿದೆ.
‘ಸದ್ಯ ಎರಡು ಕೇಂದ್ರಗಳ
ಅಕ್ರಮ ಬಯಲಿಗೆ ಬಂದಿದೆ. ರಾಜ್ಯದ ಇನ್ನೂ ಹಲವೆಡೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಸೋಮವಾರ ಈ ಬಗ್ಗೆ ವಿವರ ನೀಡಿದ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ‘ಗೋಕಾಕ ನಗರದ ಜೆಎಸ್‌ಎಸ್ ಪದವಿಪೂರ್ವ ಕಾಲೇಜು ಹಾಗೂ ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ನಡೆದ ಅಕ್ರಮ
ಗಳು ಖಚಿತಪಟ್ಟಿವೆ. ಅಥಣಿ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಅಕ್ರಮ ನಡೆ
ದಿರುವ ಅನುಮಾನಗಳಿವೆ’ ಎಂದರು.
‘ಅಕ್ರಮ ನಡೆದಿಲ್ಲ, ಭಯಪಡಬೇಕಿಲ್ಲ’
‘ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೆ, ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು. ‘ನೇಮಕಾತಿ ಪ್ರಕ್ರಿಯೆ ಇಲಾಖೆಯಿಂದ ನಡೆದರೂ ಪರೀಕ್ಷೆ ಆಯೋಜಿಸಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿಲ್ಲ ಎಂಬುದು ಗೊತ್ತಾಗಿದೆ. ಅಭ್ಯರ್ಥಿಗಳು ಭಯಪಡಬೇಕಿಲ್ಲ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.‘ಅಭಿವೃದ್ಧಿ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರ ಸವಾಲು ಸ್ವೀಕರಿಸುತ್ತೇನೆ. ನನ್ನ ಇಲಾಖೆ, ಸರ್ಕಾರದ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.