ಶೇ 25ರಷ್ಟು ಪ್ರಾತಿನಿಧ್ಯ: ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ನೀಡುವುದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ಪ್ರವೇಶ ಪರೀಕ್ಷೆ ಗಮನದಲ್ಲಿಟ್ಟುಕೊಂಡು ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ರವಿ ಹೊಸಮನಿ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಪಟ್ಟಿ ಸಿದ್ಧಪಡಿಸುವಂತೆ ಕಾನೂನು ಶಾಲೆಗೆ ನಿರ್ದೇಶನ ನೀಡಿದೆ. ‘ಈ ಪಟ್ಟಿ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದೂ ಪೀಠ ಹೇಳಿತು.
ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು ಸರ್ಕಾರ ಮಾಹಿತಿ ನೀಡಿತ್ತು.
‘ರಾಷ್ಟ್ರೀಯ ಕಾನೂನು ಶಾಲೆಯ ಪ್ರವೇಶ ಕಾಯ್ದೆ–2020 ಪ್ರಕಾರ ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿರುವ ಶೇ 25ರಷ್ಟು ವಿದ್ಯಾರ್ಥಿಗಳಿಗೆ ಮೀಸಲಾತಿ ದೊರೆಯಲಿದೆ. ಇದು ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ’ ಎಂಬುದು ಅರ್ಜಿದಾರರ ವಾದ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.