ಬೆಂಗಳೂರು: ‘ಸಚಿವ ಸ್ಥಾನ ನೀಡುವುದಾಗಿ ಬಗ್ಗೆ ನಾನು ಯಾರಿಗೂ ಭರವಸೆ ಕೊಟ್ಟಿಲ್ಲ. ಸಹಜವಾಗಿ ಯಾರು ಆಗಬೇಕೋ ಅವರು ಮಂತ್ರಿ ಆಗುತ್ತಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ಹೇಳಿಕೆಯ ಬಗ್ಗೆ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಾರೆ. ವರಿಷ್ಠರು ಒಪ್ಪದೇ ನಾನ್ಯಾಕೆ ಯಾರಿಗಾದರೂ ಭರವಸೆ ನೀಡಲಿ’ ಎಂದು ಪ್ರಶ್ನಿಸಿದರು.

‘ಸಚಿವರನ್ನಾಗಿ ಮಾಡುವ ಬಗ್ಗೆಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಇನ್ನು ಎರಡು– ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಶಂಕರ್ ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಚರ್ಚೆ ನಡೆದಿಲ್ಲ. ಸೂಕ್ತ ಸಮಯಕ್ಕಾಗಿ ಕಾಯಬೇಕು ಎಂದು ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.