ಗುರುವಾರ , ಮಾರ್ಚ್ 23, 2023
31 °C

ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಬಿ.ಎಸ್‌ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

‘ಆ ಬಗ್ಗೆ ಯಾವ ಚಿಂತನೆಯೂ ಇಲ್ಲ. ಹಾಗೇನಾದರೂ ಇದ್ದರೆ ಮುಂದೆ ತಿಳಿಸುತ್ತೇನೆ’ ಎಂದು ಶನಿವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕೆಆರ್‌ಎಸ್‌ ಸುತ್ತಮುತ್ತ ಅಕ್ರಮ ಗಣಿಗಾರಿಕೆ ಆರೋಪಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಶೋಭಾರಿಂದ ಉತ್ತಮ ಕೆಲಸ: ಕಲಬುರ್ಗಿಯಲ್ಲಿ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಯಡಿಯೂರಪ್ಪ, ‘ಪ್ರಧಾನಿ ನರೇಂದ್ರ ‌ಮೋದಿ ಅವರ ಸಂಪುಟದಲ್ಲಿ ನೂತನ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ನಿಸ್ಸಂದೇಹವಾಗಿ ರೈತರ ಸಂಕಟಗಳಿಗೆ ಸ್ಪಂದಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಶೋಭಾ ಜನನಾಯಕಿಯಾಗಿದ್ದು, ಹೋದಲ್ಲೆಲ್ಲ ಅವರ ಮಾತುಗಳನ್ನು ‌ಕೇಳಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದರು. ಈಗ ಸಚಿವೆಯೂ ಆಗಿರುವುದರಿಂದ ದೇಶದೆಲ್ಲೆಡೆ ಸಂಚರಿಸಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ’ ಎಂದರು.

‘ನಮ್ಮ ಸರ್ಕಾರ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿ ಸುಮ್ಮನಾಗಲಿಲ್ಲ. ಕಳೆದ ಬಜೆಟ್‌ನಲ್ಲಿ ಈ ಭಾಗದ ಜಿಲ್ಲೆಗಳಿಗೆ ನಂಜುಂಡಪ್ಪ ವರದಿ ಅನುಸಾರ ₹ 3000 ಕೋಟಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ₹ 1500 ಕೋಟಿ ಹಂಚಿಕೆ ಮಾಡಿದ್ದೇವೆ’  ಎಂದರು.

––

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈ ರೀತಿ ಕಚ್ಚಾಡುವುದು ಸರಿಯಲ್ಲ. ಎಲ್ಲರೂ ಸಹೋದರರಂತೆ ಬಾಳುವುದನ್ನು ಕಲಿಯಬೇಕು. ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಒಟ್ಟಾಗಿ ಹೋಗಬೇಕು
 

–ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು