ನವದೆಹಲಿ: ಕರ್ನಾಟಕದ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಅಂತರ್ ರಾಜ್ಯ ವಿವಾದದ ಕಾರಣಕ್ಕೆ ಕರ್ನಾಟಕಕ್ಕೆ ವಾಪಸ್ ಕಳುಹಿಸಲಾಗಿದೆ. ಹೀಗಾಗಿ, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಜಿ.ಸಿ.ಚಂದ್ರಶೇಖರ್ ಸೋಮವಾರ ಕೇಳಿರುವ ಲಿಖಿತ ಪ್ರಶ್ನೆಗೆ ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಉತ್ತರ ನೀಡಿದ್ದಾರೆ.

ಭೂಸ್ವಾಧೀನ ಸೇರಿದಂತೆ ಯೋಜನೆಯ ಅನುಷ್ಠಾನದ ಹೊಣೆ ಕರ್ನಾಟಕ ಸರ್ಕಾರದ್ದು. ಮೂರನೇ ಹಂತದ ಯೋಜನೆಗೆ 133 ಸಾವಿರ ಎಕರೆ ಜಾಗದ ಅಗತ್ಯ ಇದೆ. ಈವರೆಗೆ 26.46 ಸಾವಿರ ಎಕರೆಯನ್ನು ಭೂಸ್ವಾಧೀನ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಸರ್ಕಾರ ತಿಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.