ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದರೆ ಕ್ರಮದ ಎಚ್ಚರಿಕೆ: ಯತ್ನಾಳ

Last Updated 28 ಡಿಸೆಂಬರ್ 2021, 14:24 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಹೇಳಿದ್ದಾರೆ. ಈ ಬಗ್ಗೆ ಯಾರೇ ಮಾತನಾಡಿದರು ಕ್ರಮ ಜರುಗುವುದು ನಿಶ್ಚಿತ. ಆದರೇ ಯಾರಿಗೂ ಕೂಡ ಕತ್ತು ಹಿಡಿದು ಹೊರಹಾಕುವಂತ ಪ್ರಮೇಯವೇ ಇಲ್ಲ ಎಂದರು.

ಕೆಲವು ಆಕಾಂಕ್ಷಿಗಳಿಗೆ ನಿರಾಶೆ ಎಂಬುವಂತ ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ನಿರಾಶೆಯಾಗಿದೆ. ಯಾರಿಗೆ ಅಂತ ನೇರವಾಗಿ ಹೇಳಲು ಆಗುವುದಿಲ್ಲ. ಕೆಲವರು ಬೆಳಗಾವಿ ಅಧಿವೇಶನ ವೇಳೆಯಲ್ಲಿ ಸುವರ್ಣಸೌಧದಲ್ಲಿ ಓಡಾಡಿದ್ದಾರೆ ಅವರಿಗೆಲ್ಲ ನಿರಾಶೆಯಾಗಿದೆ ಎಂದು ಅವರು ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ಕಾರ್ಯಕ್ರಮ ಗೈರಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಯಡಿಯೂರಪ್ಪ ಅವರು ಖಾಸಗಿ ಕಾರ್ಯಕ್ರಮ ಹೋಗಿದ್ದಾರೆ ಎಂದು ಅವರು ಹೇಳಿದರು.

ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆಯಾಗಿದೆ. ಅಲ್ಲದೇ ಇಂದು ಯಾವುದೇ ರೀತಿಯಲ್ಲಿ ಮಹತ್ವದ ಚರ್ಚೆಗಳಾಗಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT