ಬುಧವಾರ, ಅಕ್ಟೋಬರ್ 5, 2022
26 °C

ಸಿಎಂ ಬದಲಾವಣೆ ಇಲ್ಲ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬಹುದು: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. 3 ನೇ ಸಿಎಂ ಎಂಬ ಕಾಂಗ್ರೆಸ್ ಟ್ವೀಟ್‌ನಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಇನ್ನು ಏಳೆಂಟು ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ಆದರೆ, ಪಕ್ಷದ ರಾಜ್ಯಘಟಕ ಅಧ್ಯಕ್ಷ ಅವಧಿ ಮುಗಿಯಲಿದ್ದು, ಅದಕ್ಕೆ ಬದಲಾವಣೆ ಮಾಡಬಹುದು. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಬೊಮ್ಮಾಯಿ ಅವರು ಉಳಿದಿರುವ ಅವಧಿಯನ್ನು ಮುಗಿಸಲಿದ್ದು, ನಾಯಕತ್ವ ಬದಲಾವಣೆಯ ವದಂತಿಗಳ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಅಮಿತ್‌ ಶಾ ಇತ್ತೀಚೆಗೆ ರಾಜ್ಯಕ್ಕೆ ಬಂದಾಗ ಹಲವು ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮತ್ತು ಇತರ ವಿಷಯಗಳ ಬಗ್ಗೆ ಗಮನ ಹರಿಸಲಿದ್ದಾರೆ. ಕಾಂಗ್ರೆಸ್ ಅಂತೂ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯೇ ಮರಳಿ ಅಧಿಕಾರಕ್ಕೆ ಬರಲಿದೆ. ಮುಂದೇ ತಾವೇ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್‌ ನಾಯಕರಿಗೆ ಅವಕಾಶ ಸಿಗುವುದಿಲ್ಲ. ಬಿಜೆಪಿ 135 ಸೀಟುಗಳನ್ನು ಗೆಲ್ಲುವುದು ಖಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು