ಹಾಸನ: ‘ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಅರುಣ್ ಸಿಂಗ್ ಹೇಳಿದ್ದನ್ನು ಸಿ.ಎಂ ಪಾಲಿಸಲಿ. ಹಡಗು ಮುಳುಗಿದರೆ ನಮ್ಮ ಬಳಿ ಸಬ್ ಮೆರಿನ್ ಇದೆ. ಪಕ್ಷ ಉಳಿಸಿಕೊಳ್ಳುವುದು ಗೊತ್ತು’ ಎಂದರು.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ವಿಂಗಡನೆಗಾಗಿ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನರ್ವಿಂಗಡಣಾ ಆಯೋಗ ರಚಿಸಿರುವುದು ಸರಿಯಲ್ಲ. ಕೂಡಲೇ ರಾಜ್ಯ ಚುನಾವಣಾ ಆಯೋಗ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗೆ ಚುನಾವಣೆ ಘೋಷಣೆ
ಮಾಡಬೇಕು' ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.