ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಗೊಂದಲ ಇಲ್ಲ: ಡಿಕೆಶಿ

Last Updated 7 ಫೆಬ್ರುವರಿ 2021, 20:57 IST
ಅಕ್ಷರ ಗಾತ್ರ

ಬೆಂಗಳೂರು: ‘ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದವರು, ಸೋತವರು, ಎಲ್ಲರೂ ನಮ್ಮ ಹುಡುಗರೇ. ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು, ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಅವರ ಗುರಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಪಕ್ಷದಲ್ಲಿ ಆಂತರಿಕವಾಗಿ ಚುನಾವಣೆ ನಡೆದಿದೆ. ಅದರ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಗೆಲುವು, ಸೋಲು ನನಗೆ ಮುಖ್ಯ ಅಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಹೋರಾಟದ ಛಲ ತೋರಿರುವುದು ಬಹಳ ಮುಖ್ಯ’ ಎಂದರು.

‘ಯುವ ಕಾಂಗ್ರೆಸ್‌ ಚುನಾವಣೆಯ ಫಲಿತಾಂಶದಿಂದ ಯಾವ ಗೊಂದಲವೂ ಸೃಷ್ಟಿ ಆಗಿಲ್ಲ. ಕೇಸಿನ ವಿಚಾರವಾಗಿ ಕೆಲವು ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಮೇಲೂ ಬಿಜೆಪಿ ಸ್ನೇಹಿತರು ಕೇಸು ಹಾಕಿಸಿದ್ದಾರೆ. ಹೈಕಮಾಂಡ್ ಯಾರನ್ನು ನೇಮಕ ಮಾಡುತ್ತದೆಯೋ ಅವರ ಜತೆಗೂ ಕೆಲಸ ಮಾಡುತ್ತೇನೆ. ಯಾರು ನೇಮಕ ಆಗುವುದಿಲ್ಲವೋ ಅವರನ್ನೂ ಸೇರಿಸಿಕೊಂಡು ಕೆಲಸ ಮಾಡುತ್ತೇನೆ. ಅವರಲ್ಲೂ ನಾಯಕತ್ವ ಗುಣಗಳಿವೆ. ವಿದ್ಯಾರ್ಥಿ ಚುನಾವಣೆಯಲ್ಲಿ ನಾನು ಕೂಡಾ ಮೊದಲು ಸೋತಿದ್ದೆ. ನಂತರ ಗೆದ್ದೆ’ ಎಂದರು.

ಸಚಿವರು ಹೋರಾಟ ಮಾಡುತ್ತಿರುವುದು ಅಚ್ಚರಿ:

‘ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಇಂಥ ವಿಚಾರಗಳ ಬಗ್ಗೆ ಮಾತನಾಡುವ ಮುನ್ನ ಪಕ್ಷದ ಒಳಗೆ ಚರ್ಚೆ ಮಾಡಬೇಕು. ಪಕ್ಷದ ಅಭಿಪ್ರಾಯ ತೆಗೆದುಕೊಳ್ಳಬೇಕು. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರ ಅಲ್ಲ’ ಎಂದರು.

‘ಆದರೆ, ಈ ವಿಚಾರದಲ್ಲಿ ಸಚಿವರೇ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಅವರ ಬಳಿಯೇ ಅಧಿಕಾರ ಇದೆ. ಆದರೂ ಬೀದಿಗೆ ಯಾಕೆ ಇಳಿದಿದ್ದಾರೋ ಗೊತ್ತಾಗುತ್ತಿಲ್ಲ. ಸ್ವಾಮೀಜಿಗಳು ಹೋರಾಟ ಮಾಡುವುದರಲ್ಲಿ ಒಂದು ಅರ್ಥ ಇದೆ. ಅವರಿಗೆ ಧ್ಯೇಯ, ಉದ್ದೇಶ ಇರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT